ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಸದಸ್ಯತ್ವದಿಂದ ಟಿಎಂಸಿ ನಾಯಕಿ ಮಹುವಾ ಮೋಯಿತ್ರಾ ಅವರನ್ನು ಉಚ್ಚಾಟಿಸಿದ್ದು, ‘ಇದು ದ್ರೋಹದ ಕೆಲಸ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಇವತ್ತಿನ ಘಟನೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಒಂದು ದೊಡ್ಡ ಕಪ್ಪು ಚುಕ್ಕೆ.ಏನೇ ಆದರೂ ನಾವು ಮಹುವಾ ಜೊತೆ ಇರಲಿದ್ದೇವೆ. ಬಿಜೆಪಿಯವರು ನಮ್ಮನ್ನು ಚುನಾವಣೆಯಲ್ಲಿ ಸೋಲಿಸಲು ಆಗುವುದಿಲ್ಲ ಎಂದು ಈ ರೀತಿ ಮಾಡಿದ್ದಾರೆ’ ಎಂದು ಆಕ್ಷೇಪಿಸಿದ್ದಾರೆ.
ಬಿಜೆಪಿಯು ಜನರ ತೀರ್ಪನ್ನು ಕೆಡವಿದೆ. ನೋಡುತ್ತಿರಿ, ಮೋಯಿತ್ರಾ ಮತ್ತೆ ಚುನಾವಣೆಯಲ್ಲಿ ದೊಡ್ಡ ಬಹುಮತದೊಂದಿಗೆ ಗೆದ್ದು ಲೋಕಸಭೆಗೆ ಹೋಗುತ್ತಾಳೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಮಹುವಾ ಮೋಯಿತ್ರಾ ‘ಕಾಂಗರೂ ನ್ಯಾಯಾಲಯವೊಂದು ನೇಣು ಶಿಕ್ಷೆ ವಿಧಿಸಿದಂತಿದೆ’ ಎಂದು ಪ್ರತಿಕ್ರಿಯಿಸಿದ್ದರು.