ಮೈನ್‌ಪುರಿ ಉಪಚುನಾವಣೆ: ಡಿಂಪಲ್ ಯಾದವ್ ಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶದ ಮೈನ್‌ ಪುರಿ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆಯಲ್ಲಿ ಸಮಾಜವಾದಿ ಪಕ್ಷ(ಎಸ್ಪಿ) ಸ ಅಭ್ಯರ್ಥಿ ಡಿಂಪಲ್ ಯಾದವ್ ಅವರು 1,19,500 ಮತಗಳೊಂದಿಗೆ (65.87%) ಭಾರಿ ಮುನ್ನಡೆಯಲ್ಲಿದ್ದಾರೆ. ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ಮೈನ್‌ಪುರಿ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಡಿಂಪಲ್ ಯಾದವ್ ವಿರುದ್ಧ ಮಾಜಿ ಸಂಸದ ರಘುರಾಜ್ ಸಿಂಗ್ ಶಾಕ್ಯಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಒಂದು ಕಾಲದಲ್ಲಿ ಪ್ರಗತಿಶೀಲ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರ ನಿಕಟವರ್ತಿಯಾಗಿದ್ದ ಬಿಜೆಪಿ ಅಭ್ಯರ್ಥಿ, ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೇಸರಿ ಪಕ್ಷಕ್ಕೆ ಸೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!