ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಿ, ಗಣೇಶೋತ್ಸವಕ್ಕೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್​​ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ವಕ್ಫ್ ಬೋರ್ಡ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.

ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠ, ಈದ್ಗಾ ಮೈದಾನದಲ್ಲಿ ಮುಂದಿನ ಎರಡು ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ತದನಂತರ ಕರ್ನಾಟಕ ಹೈಕೋರ್ಟ್​ನಲ್ಲಿ ಮತ್ತೊಮ್ಮೆ ಪ್ರಶ್ನಿಸಬಹುದು ಎಂದು ಆದೇಶಿಸಿತು.

ವಕ್ಫ್‌ ಪರ ಕಪಿಲ್ ಸಿಬಲ್‌ ಹಾಗು ರಾಜ್ಯ ಸರ್ಕಾರದ ಪರವಾಗಿ ಮುಕುಲ್‌ ರೋಹ್ಟಗಿ ಅವರ ವಾದ-ಪ್ರತಿವಾದ ಆಲಿಸಿರುವ ಕೋರ್ಟ್ ಚಾಮರಾಜಪೇಟೆ ಮೈದಾನದಲ್ಲಿ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕರ್ನಾಟಕ್ಕೆ ಸರ್ಕಾರಕ್ಕೆ ಸೂಚಿಸಿ, ಎರಡು ದಿನಗಳ ಬಳಿಕ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡುವಂತೆ ಆದೇಶ ಪ್ರಕಟಿಸಿತು.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಯ ವಿಚಾರವಾಗಿ ಹೈಕೋರ್ಟ್ ಗ್ನೀನ್‌ ಸಿಗ್ನಲ್‌ ನೀಡಿದ ಆದೇಶ ಪ್ರಶ್ನಿಸಿದ ವಕ್ಫ್‌ ಬೋರ್, ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮೊದಲು ಈ ಸಂಬಂಧ ಸುಪ್ರೀಂನ ಇಬ್ಬರು ನ್ಯಾಯಮೂರ್ತಿಗಳ ನಡುವೆ ಒಮ್ಮತ ಮೂಡಲಿಲ್ಲ. ಬಳಿಕ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ಮೂವರು ಸದಸ್ಯರಿದ್ದ ಬೇರೊಂದು ಪೀಠಕ್ಕೆ ಅರ್ಜಿಯನ್ನು ವರ್ಗಾಯಿಸಿದ್ದರು.

ಸುಪ್ರೀಂ ಕೋರ್ಟ್ ನ ಸಿಐಜೆ ನೇತೃತ್ವದ ನ್ಯಾಯಪೀಠಕ್ಕೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಅರ್ಜಿ ವರ್ಗಾವಣೆಗೊಂಡ ನಂತ್ರ, ಒಂದೇ ಗಂಟೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ತ್ರಿಸದಸ್ಯ ಪೀಠವನ್ನುರಚನೆ ಮಾಡಿದರು.ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಹಾಗೂ ಎಂ.ಎಂ ಸುಂದರೇಶ್ ಅವರ ತ್ರಿಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ಆರಂಭಗೊಂಡಿತು.
ಅಂತಿಮವಾಗಿ ವಾದ-ಪ್ರತಿವಾದ ಆಲಿಸಿರುವ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕರ್ನಾಟಕ್ಕೆ ಸರ್ಕಾರಕ್ಕೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!