ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ದೊಡ್ಡ ಇತಿಹಾಸ ಬರೆದಿದೆ. ಚಿತ್ರರಂಗದಿಂದ ರಾಜಕೀಯಕ್ಕೆ ಕಾಲಿಟ್ಟ ಮೊದಲ ಪ್ರಯತ್ನದಲ್ಲೇ ಈ ಮಟ್ಟದ ಯಶಸ್ಸು ಕಂಡಿರುವುದು ಎಲ್ಲರ ಗಮನ ಸೆಳೆಯುತ್ತಿದೆ.
ಈ ಭರ್ಜರಿ ಗೆಲುವಿಗೆ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ.
ಕಠಿಣ ಟೀಕೆಗಳ ನಡುವೆಯೂ ಶಾಂತವಾಗಿ ಕೆಲಸದ ಮೇಲೆ ನಂಬಿಕೆ ಇಟ್ಟು ಮುಂದುವರಿದುದು ವಿಜಯ್ ಅವರ ದೊಡ್ಡ ಶಕ್ತಿ ಎಂದು ಅವರು ಹೇಳಿದ್ದಾರೆ. ಹಿಂದೆ ನಡೆದ ಮಾಧ್ಯಮ ಸಂವಾದದಲ್ಲಿ ತಮಾಷೆಯಾಗಿ ‘TVK ಎಂದರೆ Try Vijay As King’ ಎಂದು ಹೇಳಿದ್ದನ್ನು ಕೂಡ ನೆನಪಿಸಿಕೊಂಡಿದ್ದಾರೆ.
ಇದನ್ನೂ ಓದಿ:
ತಮಿಳುನಾಡು ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವ ಶಕ್ತಿ ವಿಜಯ್ ಅವರಿಗೆ ಸಿಗಲಿ ಮತ್ತು ರಾಜ್ಯ ಅಭಿವೃದ್ಧಿಯತ್ತ ಸಾಗಲಿ ಎಂದು ಶಿವರಾಜ್‌ಕುಮಾರ್ ಹಾರೈಸಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವುದು ಈಗ ಅವರ ಮುಂದಿನ ದೊಡ್ಡ ಜವಾಬ್ದಾರಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಚಿತ್ರರಂಗದಲ್ಲಿ ಹೆಸರು ಮಾಡಿರುವ ಇಬ್ಬರು ನಟರ ನಡುವಿನ ಪರಸ್ಪರ ಗೌರವ ಕೂಡ ಗಮನ ಸೆಳೆಯುತ್ತಿದೆ. ವಿಜಯ್ ಅವರ ಕೊನೆಯ ಸಿನಿಮಾವನ್ನು ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದ್ದು, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ. TVK ಗೆಲುವು ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದೆ.



