ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ʻದಳʼದಲ್ಲಿ ಇನ್ನೊಂದು ವಿಕೆಟ್ ಪತನವಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿ ಶಂಕರ್ ಜೆಡಿಎಸ್‌ನಿಂದ ಹೊರಬಂದಿದ್ದು, ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು..ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಬಾವುಟ ಹಿಡಿಯಲಿದ್ದಾರೆ.
ಬಿಜೆಪಿಯೊಂದಿಗಿನ ಮೈತ್ರಿಗೆ ಅಸಮಾಧಾನ ಹೊರಹಾಕಿದ್ದ ಗೌರಿಶಂಕರ್ ತಮ್ಮ ಬೆಂಬಲಿಗರೊಂದಿಗೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.