ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ರಜೆ ಹಿನ್ನೆಲೆ ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿದ್ದು, ರಾಜ್ಯಾದ್ಯಂತ ತೆರಳುವ ಎಲ್ಲ ಬಸ್‌ಗಳು ಫುಲ್ ರಶ್ ಆಗಿವೆ.
ಮೈಸೂರು ದಸರಾಗೆ ಹೆಚ್ಚುವರಿ ಬಸ್ ಬಿಟ್ಟಿರುವುದರಿಂದ ಬೇರೆ ಜಿಲ್ಲೆಗಳಿಗೆ ತೆರಳುವ ಬಸ್‌ಗಳ ಸಂಖ್ಯೆ ಕಡಿಮೆಯಿದೆ. ಹಾಗಾಗಿ ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋಗುತ್ತಿದ್ದಾರೆ. ಶಿವಮೊಗ್ಗ, ಹಾಸನ, ಮಂಗಳೂರು, ಧರ್ಮಸ್ಥಳ, ಮಂಡ್ಯ, ಚಿಕ್ಕಮಗಳೂರು, ಉಡುಪಿ, ರಾಯಚೂರು, ಗದಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಗೆ ಬಿಎಂಟಿಸಿ ಬಸ್‌ಗಳನ್ನೇ, ಸ್ಪೆಷಲ್ ಬಸ್‌ಗಳಾಗಿ ರಸ್ತೆಗಿಳಿದಿವೆ.
ಮೆಜೆಸ್ಟಿಕ್‌ನಲ್ಲಿ ಎಲ್ಲಾ ಬಸ್‌ಗಳೂ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದು, ಹೆಚ್ಚುವರಿ ಬಸ್ ಬಿಡುವಂತೆ ಜನ ಒತ್ತಾಯಿಸುತ್ತಿದ್ದಾರೆ. ಇಂದು ಮುಂಜಾನೆಯಿಂದ ಜನದಟ್ಟಣೆ ಹೆಚ್ಚಾಗಿದ್ದು, ಮೆಜೆಸ್ಟಿಕ್ ಸುತ್ತಮುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.