spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸ್ ಸಂಚಾರ, ಜನಜಂಗುಳಿ ಇಲ್ಲದೆ ಬಿಕೋ ಎನ್ನುತ್ತಿದೆ ಮೆಜೆಸ್ಟಿಕ್!

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಸದಾ ಜನಜಂಗುಳಿಯಿಂದ ಕೂಡಿದ್ದ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ.
ನಿನ್ನೆ ರಾತ್ರಿಯೇ ಪೊಲೀಸರು ಮೆಜೆಸ್ಟಿಕ್ ನ ಎಲ್ಲಾ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದು, ನಗರದಲ್ಲಿ ಯಾವುದೇ ಬಸ್ ಸಂಚಾರ ನಡೆಯುತ್ತಿಲ್ಲ. ಮೆಜೆಸ್ಟಿಕ್ ನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಬಸ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಕೆಲವು ಆಟೋಗಳು ಸಂಚಾರ ನಡೆಸುತ್ತಿದೆ.
ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ಮೆಜೆಸ್ಟಿಕ್ ನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಎಪಿಎಸ್ ಆರ್ ಟಿಸಿ ಬಸ್ ಗಳು ಸಂಚರಿಸದೆ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.
ಇಂದಿನಿಂದ 14ದಿನ ರಾಜ್ಯ ಸಂಪೂರ್ಣ ಬಂದ್ ಆಗಿದ್ದು, ತುರ್ತು ಸೇವೆಗಳಿಗೆ ಹೊರತುಪಡಿಸಿ ಯಾರೂ ಅನಗತ್ಯ ಓಡಾಟ ನಡೆಸುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss