ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯ ಬೇಗಂಪುರ ಮುಖ್ಯ ಮಾರುಕಟ್ಟೆಯಲ್ಲಿರುವ ದಿನಸಿ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ದೆಹಲಿ ಅಗ್ನಿಶಾಮಕ ಸೇವೆಗಳ ಪ್ರಕಾರ, ಬೆಂಕಿಯನ್ನು ನಂದಿಸಲು ಒಂಬತ್ತು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಬೆಂಕಿಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.