ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಧಾನಸಭೆಯ ಆವರಣದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿ ಕಾರನ್ನು ನುಗ್ಗಿಸಿ, ಸ್ಪೀಕರ್ ಕಾರು ಮೇಲೆ ಮಸಿ ಎರಚಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ವಿಧಾನಸಭೆಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದರ ಬೆನ್ನಲ್ಲೇ ಯುಪಿ ನೋಂದಣಿ ಸಂಖ್ಯೆಯನ್ನು ಹೊಂದಿದ್ದ ಕಾರು ಗೇಟ್ ಸಂಖ್ಯೆ 2 ಅನ್ನು ಮುರಿದು ವಿಧಾನಸಭೆ ಆವರಣವನ್ನು ಪ್ರವೇಶಿಸಿದ್ದು, ಈ ವೇಳೆ ಅಲ್ಲಿಯೇ ಇದ್ದ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಾರಿನ ಮೇಲೆ ಮಸಿ ಎರಚಿ ಪರಾರಿಯಾಗಿದ್ದಾರೆ.
ಘಟನೆ ಬೆನ್ನಲ್ಲೇ ವಿಧಾನಸಭೆ ಆವರಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಕಾರಿನ ಮಾಲೀಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.



