Tuesday, June 6, 2023

Latest Posts

ರಾಜ್ಯ ಬಿಜೆಪಿಯಲ್ಲಿ ಮತ್ತೆ ಮೇಜರ್ ಸರ್ಜರಿ: ಜಿಲ್ಲಾಧ್ಯಕ್ಷರ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಇದೀಗ ವಿವಿಧ ಜಿಲ್ಲಾಧ್ಯಕ್ಷರು , ಉಪಾಧ್ಯಕ್ಷರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಅವರು, ತುಮಕೂರು ಜಿಲ್ಲಾ ಅಧ್ಯಕ್ಷರನ್ನಾಗಿ ಲಕ್ಷ್ಮೀಶ ಅವರನ್ನು ನೇಮಕ ಮಾಡಿದ್ದಾರೆ. ಮಧುಗಿರಿ ಜಿಲ್ಲಾ ಅಧ್ಯಕ್ಷರನ್ನಾಗಿ ಶಿರಾದ ಬಿ.ಕೆ.ಮಂಜುನಾಥ್ ನೇಮಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಜಿಲ್ಲಾಧ್ಯಕ್ಷರನ್ನಾಗಿ ಸಂಜಯ್ ಕಪಾಟ್ ಕರ್ ಅವರನ್ನು ನೇಮಿಸಲಾಗಿದೆ. ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರನ್ನಾಗಿ ಬೆಂಗಳೂರಿನ ಸೈಯತ್ ಸಲಾಂ, ಉಪಾಧ್ಯಕ್ಷರನ್ನಾಗಿ ಮೊಹಮ್ಮದ್ ಫಾರೂಕ್ ನೇಮಕ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!