Monday, October 2, 2023

Latest Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರದಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.

ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದು, ಆರ್ಟಿಕಲ್ಚರ್ ಮತ್ತು ಸಿರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಕುಮಾರ್ ಕಠಾರಿಯ ಅವರನ್ನು ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಪಂಕಜ್ ಕುಮಾರ್ ಪಾಂಡೆ ಅವರನ್ನು ಎಂಸ್‌ಎಂಇ ಮತ್ತು ಮೈನ್ಸ್ ಕಾರ್ಯದರ್ಶಿಯ ಹುದ್ದೆಯಿಂದ ವರ್ಗಾವಣೆ ಮಾಡಿ, ಕೆಪಿಟಿಸಿಎಲ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ.

ಕೆಪಿಟಿಸಿಎಲ್ ಎಂಡಿಯಾಗಿದ್ದ ಡಾ.ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವಜನ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

ಕೃಷಿ ಇಲಾಖೆಯ ಕಮೀಷನರ್ ಆಗಿದ್ದ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ, ಕರ್ನಾಟಕ ಅರ್ಬನ್ ವಾಟರ್ ಸಪ್ಲೈ ಮತ್ತು ಡ್ರೈನೇಜ್ ಬೋರ್ಡ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ. ಇಲ್ಲಿದ್ದಂತ ಮೋಹನ್ ರಾಜ್ ಕೆ.ಪಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!