Wednesday, August 10, 2022

Latest Posts

ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಮೂವರು ಐಪಿಎಸ್, ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಶಿವ ಪ್ರಕಾಶ್ ಅವರ ಜಾಗಕ್ಕೆ ವರ್ತಿಕಾ ಕಟಿಯಾರ್ ಅವರನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರ ಎಸ್ ಪಿ ಆಗಿದ್ದ ದಿವ್ಯಾ ಶರಾ ಥಾಮಸ್ ಅವರ ಜಾಗಕ್ಕೆ ಸಂಗೀತಾ ಜಿ ಅವರನ್ನು ನೇಮಿಸಿದೆ. ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಅನುಪಮ್ ಅಗರ್ವಾಲ್ ಅವರ ಜಾಗಕ್ಕೆ ಹೆಚ್ ಡಿ ಆನಂದ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ, ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಕೂಡ ಮಾಡಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್(BMRCL) ಎಂಡಿಯಾಗಿದ್ದಂತ ರಾಕೇಶ್ ಸಿಂಗ್ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ನೂತನ ಬಿಎಂ ಆರ್ ಸಿ ಎಲ್ ಎಂಡಿಯಾಗಿ ಅಂಜುಂ ಪರ್ವೇಜ್ ನೇಮಕ ಮಾಡಿದೆ.
ಇನ್ನೂ ಹಾರ್ಟಿಕಲ್ಚರ್ ಮತ್ತು ಸೆರಿಕಲ್ಚರ್ ಡಿಪಾರ್ಟ್ಮೆಂಟ್ ನ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದಂತ ರಾಜೇಂದ್ರ ಕುಮಾರ್ ಕಟಾರಿಯ ಅವರನ್ನು, ತಕ್ಷಣದಿಂದ ಜಾರಿಗೆ ಬರುವಂತೆ ಸಾರಿಗೆ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಈ ಹುದ್ದೆಯಲ್ಲಿದ್ದಂತ ಅರ್ಜುನ್ ಫರ್ವೇಜ್ ಅವರನ್ನು ಬಿಎಂಆರ್ ಸಿ ಎಲ್ ಎಂಡಿಯಾಗಿ ನೇಮಕ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss