ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ನಡುವೆಯೇ, ಕೇಂದ್ರ ಸರ್ಕಾರ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ವಜಾ ಮಾಡಲಾಗಿದ್ದು, ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಿಸಲಾಗಿದೆ.
ಯಾರು ಈ ವಿನೀತ್ ಜೋಶಿ?
1992ರ ಬ್ಯಾಚ್‌ನ ಐಎಎಸ್ ಅಧಿಕಾರಿ ವಿನೀತ್ ಜೋಶಿ, ಐಐಟಿ ಕಾನ್ಪುರದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಹಾಗೂ ಐಐಎಫ್‌ಟಿ ದೆಹಲಿಯಿಂದ ಎಂ.ಬಿ.ಎ ಪದವಿ ಪಡೆದಿದ್ದಾರೆ. ಅವರು ಈ ಹಿಂದೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಮೊದಲ ಮಹಾನಿರ್ದೇಶಕರಾಗಿ ಹಾಗೂ ಸಿಬಿಎಸ್‌ಇ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2025ರ ಜನವರಿಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಇದನ್ನೂ ಓದಿ:
ಹೊಸ ನೇಮಕಾತಿ ಮತ್ತು ಇತರೆ ಬದಲಾವಣೆಗಳು
ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಪಶ್ಚಿಮ ಬಂಗಾಳ ಕೇಡರ್‌ನ 1994ರ ಬ್ಯಾಚ್ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿಯಾಗಿ ಟಿ.ಕೆ. ಅನಿಲ್ ಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ.



