ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐಎಸ್ಐ ಜೊತೆ ಸಂಪರ್ಕ ಹೊಂದಿರುವ ಪ್ರಮುಖ ಜಾಲವನ್ನು ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದು, 11 ಜನರನ್ನು ಬಂಧಿಸಿದ್ದಾರೆ.
ದೆಹಲಿ ಮತ್ತು ಪಂಜಾಬ್ನ ವಿವಿಧ ಸ್ಥಳಗಳಿಂದ 11 ಜನರನ್ನು ಬಂಧಿಸಲಾಗಿದ್ದು, ಐಎಸ್ಐ ಜೊತೆಗೆ ನಿಷೇಧಿತ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಜೊತೆಗೂ ಸಂಪರ್ಕ ಹೊಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ದೇಶದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿದ್ದ ಈ ಗುಂಪು, 9 ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಜೊತೆಗೆ ಹಲವಾರು ಮಿಲಿಟರಿ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.
ಮಿಲಿಟರಿ ನೆಲೆಗಳು, ರೈಲು ನಿಲ್ದಾಣಗಳು ಮತ್ತು ಪ್ರಮುಖ ಸೂಕ್ಷ್ಮ ಪ್ರದೇಶಗಳ ಫೋಟೋಗಳು ಮತ್ತು ವಿಡಿಯೋಗಳನ್ನು ಸಂಗ್ರಹಿಸಲು ಸೌರಶಕ್ತಿ ಚಾಲಿತ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಬಳಿಕ ಸಂಗ್ರಹಿಸಿದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.



