ಹೊಸದಿಗಂತ ಡಿಜಿಟಲ್ ಡೆಸ್ಕ್:
18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಆಗಮಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ.
ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಸ್ತೋಮವನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.