May 14, 2026
Thursday, May 14, 2026
spot_img

WEATHER | ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಜೋರು ಮಳೆ ಆದರೆ, ಹಲವು ಕಡೆ ಅತಿಯಾದ ಬಿಸಿಲು ಇರಲಿದೆ. ಮಿಶ್ರ ವೆದರ್‌ ಇದಾಗಿದ್ದು, ಜಿಲ್ಲೆಗಳಲ್ಲಿ ಹವಾಮಾನ ಹೀಗಿರಲಿದೆ..

ಮೈಸೂರು, ಚಾಮರಾಜನಗರ, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳು ಹಾಗೂ ಕರಾವಳಿಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಆದರೆ ಉಡುಪಿ, ಮಂಗಳೂರು ಭಾಗದಲ್ಲಿ ಭಾರೀ ಹ್ಯುಮಿಡಿಟಿ ಇರಲಿದ್ದು, ಸೆಕೆಯ ವಾತಾವರಣ ಇರುತ್ತದೆ. ಕಲಬುರಗಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಿಸಲು ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !