ಹೊಸದಿಗಂತ ಡಿಜಿಟಲ್ ಡೆಸ್ಕ್;
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿಯನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಸಂಜೆ 6:45 ಕ್ಕೆ ಮಕರ ಜ್ಯೋತಿ ದರುಶನವಾಯಿತು.
ಶಬರಿಮಲೆಯಿಂದ 4 ಕಿಲೋಮೀಟರ್ ದೂರದಲ್ಲಿರುವ ಪೊನ್ನಂಬಲಮೇಡುವಿನಲ್ಲಿ ಮಕರ ಜ್ಯೋತಿಯ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯ ಬೆಳಕನ್ನು ನೋಡಿ ಕಣ್ತುಂಬಿಕೊಂಡರು.
ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಕಾಣಿಸಿಕೊಂಡಿದ್ದಾರೆ.


