ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡಿ: ಸರಕಾರಕ್ಕೆ ವಾಟಾಳ್ ನಾಗರಾಜ್ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗ್ಯಾರಂಟಿಗಳು ಮಹಿಳೆಯರ ಕಡೆ ಮಾತ್ರ ಹೋಗಬಾರದು, ಪುರುಷರ ಕಡೆಗೂ ಅದು ಬರಬೇಕು. ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ರಾಜ್ಯ ಸರ್ಕಾರದ ವಿರುದ್ಧ ಆಗ್ರಹಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಂತೆ ಪುರುಷರಿಗೂ ಹಣ ನೀಡಬೇಕು. ಮಹಿಳೆಯರಿಗೆ ಈ ಯೋಜನೆಗಳನ್ನು ನೀಡಿರುವುದು ನನಗೆ ಖುಷಿ ಕೊಟ್ಟಿದೆ. ಹಾಗೆಯೇ ಇದನ್ನು ಪುರುಷರಿಗೂ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ದಸರಾಗೆ ಬೇರೆ ಬೇರೆ ರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಕರ್ನಾಟಕದ ಮೂಲೆ ಮೂಲೆಯಿಂದ ಮಹಿಳೆಯರು ಪುರುಷರು ಅಧಿಕವಾಗಿ ಬರುತ್ತಾರೆ. ಈ ಸಂದರ್ಭವನ್ನು ಬಳಸಿಕೊಂಡು ನಾನು ಸರ್ಕಾರದ ಮುಂದೆ ಈ ವಿಚಾರವನ್ನು ಇಡುತ್ತಿದ್ದೇನೆ ಎಂದಿದ್ದಾರೆ.

ಪ್ರತಿಭಟನೆಗೆ ನೇರವಾಗಿ ಅವರು ಬಿಎಂಟಿಸಿ (BMTC) ಬಸ್ ನಿಲ್ದಾಣದ ಒಳಗೆ ಕಾರಿನಲ್ಲಿ ಬಂದಿದ್ದಾರೆ. ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧವಿದ್ದರೂ ಲೆಕ್ಕಿಸದೇ ಒಳಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!