ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷ ಪರಿಹರಿಸಲು ರಾಜತಾಂತ್ರಿಕ ಪ್ರಯತ್ನ ಮಾಡಿ: ಕೇಂದ್ರ ಸರಕಾರಕ್ಕೆ ದೀದಿ ಸಲಹೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಇರಾನ್-ಇಸ್ರೇಲ್ ಯುದ್ಧ ತಡೆಯಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಉಪಕ್ರಮಗಳನ್ನು ತೆಗೆದುಕೊಳ್ಳುವಂತೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ.

ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಪರಿಸರ ಸಮಸ್ಯೆಗಳ ಕುರಿತು ಕೇಂದ್ರ ಮಸೂದೆ ಅಂಗೀಕರಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ವಿದೇಶಿ ವ್ಯವಹಾರಗಳು ಭಾರತ ಸರ್ಕಾರದ ಅಡಿಯಲ್ಲಿ ಬರುತ್ತವೆ. ಹೀಗಾಗಿ ನಾನು ಬಾಹ್ಯ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲವಾದರೂ, ಈ ಯುದ್ಧದಂತಹ ಪರಿಸ್ಥಿತಿಯನ್ನು ನಿಲ್ಲಿಸಲು ಅವರು ರಾಜತಾಂತ್ರಿಕ ಶಾಂತಿಯುತ ಉಪಕ್ರಮವನ್ನು ತೆಗೆದುಕೊಳ್ಳಬೇಕು ಎಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

ಅವರಿಗೆ ಏನಾದರೂ ಸಮಸ್ಯೆ ಇರಬಹುದು. ಆದರೆ ಬಾಹ್ಯ ವ್ಯವಹಾರಗಳು ಮತ್ತು ರಾಜತಾಂತ್ರಿಕ ವಿಷಯಗಳ ಬಗ್ಗೆ ಮಾತನಾಡಲು ನನಗೆ ಅಧಿಕಾರವಿಲ್ಲ. ಈ ಪ್ರಪಂಚದ ಕಾಳಜಿಯುಳ್ಳ ಒಬ್ಬ ನಾಗರಿಕಳಾಗಿ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!