‘ಮೇಕ್ ಇನ್ ಇಂಡಿಯಾ’, ‘ವೋಕಲ್ ಫಾರ್ ಲೋಕಲ್’ ಸ್ವಯಂ ಉದ್ಯೋಗಕ್ಕೆ ಅವಕಾಶಗಳನ್ನು ಸೃಷ್ಟಿಸುತ್ತದೆ:ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ರೋಜ್‌ಗಾರ್ ಮೇಳದಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 71,056 ನೇಮಕಾತಿ ಪತ್ರಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ವಿತರಿಸಿದರು ಮತ್ತು ಇದು ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ದ್ವೀಪಗಳು, ಗುಜರಾತ್, ಯುಪಿ ಮತ್ತು ಮಹಾರಾಷ್ಟ್ರದಲ್ಲಿ ಮೇಳವನ್ನು ಆಯೋಜಿಸಲಾಗಿದೆ ಎಂದು ಪ್ರಸ್ತಾಪಿಸಿದ ಪ್ರಧಾನಿ, ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಯೋಜನೆ ಅಡೆತಡೆಯಿಲ್ಲದೆ ಮುಂದುವರಿಯುತ್ತದೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಮೇಕ್ ಇನ್ ಇಂಡಿಯಾ’ ಅಥವಾ ‘ವೋಕಲ್ ಫಾರ್ ಲೋಕಲ್’ ನಂತಹ ಯೋಜನೆಗಳು ದೇಶದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದರು. ತಮ್ಮ ಭಾಷಣದಲ್ಲಿ ಪ್ರೊಡಕ್ಷನ್ ಲಿಂಕ್ ಇನಿಶಿಯೇಟಿವ್ (ಪಿಎಲ್‌ಐ) ಯೋಜನೆ ಹೊಸ ಉದ್ಯೋಗಾವಕಾಶಗಳ ಉತ್ತಮ ಮೂಲವೆಂದು ಪ್ರಸ್ತಾಪಿಸಿದರು.

ಪಿಎಲ್‌ಐ ಯೋಜನೆಯಡಿಯಲ್ಲಿ ಮಾತ್ರ 60 ಲಕ್ಷ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಈ ಎಲ್ಲಾ ಯೋಜನೆಗಳು ದೇಶದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ. ಅಂದರೆ ಸರ್ಕಾರಿ ಮತ್ತು ಸರ್ಕಾರೇತರ ಉದ್ಯೋಗಗಳು ನಿರಂತರವಾಗಿ ಹೆಚ್ಚುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದರು. ಅಮೃತ ಮಹೋತ್ಸವದಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪವನ್ನು ಪುನರುಚ್ಚರಿಸಿದ ಪ್ರಧಾನಿ, ಈ ಅವಧಿಯಲ್ಲಿ ಹೊಸದಾಗಿ ನೇಮಕಗೊಂಡವರು ದೇಶದ ‘ಸಾರಥಿ’ಯಾಗಿರುತ್ತಾರೆ ಎಂದರು.

ಇಂದು 45 ನಗರಗಳಲ್ಲಿ 71,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇದು ಸಾವಿರಾರು ಕುಟುಂಬಗಳ ಮನೆಗೆ ಸಂತೋಷವನ್ನು ತರುತ್ತದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು. ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗರ್ ಮೇಳದಲ್ಲಿ ಎಲ್ಲಾ ಹೊಸ ನೇಮಕಾತಿಗಳಿಗಾಗಿ ಕರ್ಮಯೋಗಿ ಪ್ರಾರಂಭ್ ಮಾಡ್ಯೂಲ್ – ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಅನ್ನು ಪ್ರಾರಂಭಿಸಿದರು.

ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!