ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತದಲ್ಲಿ ಮತ್ತೆ ಪೂರ್ತಿ ಲಾಕ್ ಡೌನ್ ಮಾಡಿ: ಅಮೆರಿಕ ಸಲಹೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದ್ದು, ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಸಲಹೆ ನೀಡಿದೆ.
ಈ ಬಗ್ಗೆ ಶ್ವೇತ ಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ ತಿಳಿಸಿದ್ದು, ಭಾರತದಲ್ಲಿ ಕೊರೋನಾ ಲಸಿಕೆ ಅಭಿಯಾನ ಹೆಚ್ಚು ಮಾಡುವಂತೆ ಸಲಹೆ ನೀಡಿದ್ದಾರೆ. ಭಾರತದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ ಹೆಚ್ಚಾಗಿದ್ದು, ಇತರೆ ರಾಷ್ಟ್ರಗಳು ಭಾರತಕ್ಕೆ ಬೆಂಬಲವಾಗಬೇಕಿದೆ ಎಂದು ಡಾ. ಫೌಸಿ ತಿಳಿಸಿದ್ದಾರೆ.
ಭಾರತದಲ್ಲಿನ 2 ಲಸಿಕೆ ಹೊರತುಪಡಿಸಿ ಭಾರತ ಬೇರೆ ರಾಷ್ಟ್ರಗಳಲ್ಲಿನ ಲಸಿಕೆಯನ್ನು ಖರೀದಿಸಬೇಕು. ಜೊತೆಗೆ ದೇಶಾದ್ಯಂತ ಲಾಕ್ ಡೌನ್ ಮಾಡುವುದು ಉತ್ತಮ ಎಂದು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss