Wednesday, August 10, 2022

Latest Posts

ಕೋವಿಡ್ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಚಿತ್ರದುರ್ಗ:

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಸಿಬ್ಬಂದಿ ಕೋವಿಡ್ 1ಮತ್ತು 2ನೇ ಅಲೆಯನ್ನು ಉತ್ತಮವಾಗಿ ನಿರ್ವಹಿಸಿದ್ದೀರ. ಅದರಂತೆ ೩ನೇ ಅಲೆ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಹಾಗಾಗಿ ಕಾರ್ಯಗಾರದಲ್ಲಿ ಕೌಶಲ್ಯ ಪಡೆದು ಪೂರ್ವಸಿದ್ಧತೆ ಮಾಡೊಕೊಳ್ಳಿ ಎಂದು ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಕೋವಿಡ್ 3 ನೇ ಅಲೆಯ ಬಗ್ಗೆ ಮುಂಜಾಗ್ರತಾ ಕ್ರಮಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳವರಿಗೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿ, 3ನೇ ಅಲೆ ತುಂಬಾ ಪರಿಣಾಮಕಾರಿ ಎನ್ನಲಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ಈ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಮಾತನಾಡಿ, ಕೋವಿಡ್ ನಿರ್ವಹಣೆಯಲ್ಲಿ ಮುಂಚೋಣಿ ವಾರಿಯರ‍್ಸ್‌ಗಳ ಪಾತ್ರ ಪ್ರಮುಖವಾಗಿದೆ. ಈ ಹಿಂದಿನ ಅಲೆಗಳಲ್ಲಿ ಕಲಿತ ಪಾಠ ಈಗ ಉಪಯೋಗಗಕ್ಕೆ ಬರುತ್ತದೆ. ಅದರ ಜೊತೆಗೆ ಕಾರ್ಯಗಾರದಲ್ಲಿ ನೀಡುವ ಮಾಹಿತಿ, ಕೌಶಲ್ಯಗಳನ್ನು ನಿಮ್ಮ ಕೆಲಸದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ, ಮೂರನೇ ಅಲೆ ನಿಯಂತ್ರಣ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಈ ಕಾರ್ಯಾಗಾರ ತಮಗೆಲ್ಲ ಸಹಕಸರಿಯಾಗಿದೆ. ನುರಿತ ತಜ್ಞರು ಯಾವ ರೀತಿ ನಮ್ಮ ಸಿದ್ಧತೆ ಇರಬೇಕು. ವರದಿ ಯಾವ ರೀತಿ ಸಲ್ಲಿಸಬೇಕು, ಅಗತ್ಯ ಪರಿಕರಗಳನ್ನು ಹೇಗೆ ಸಜ್ಜುಗೊಳಿಸಬೇಕು ಎಂಬುದನ್ನು ತಿಳಿಸಲಿದ್ದಾರೆ. ಎಲ್ಲರೂ ಒಟ್ಡಾಗಿ ೩ನೇ ಅಲೆಯ ಪೂರ್ವಸಿದ್ಧತೆ ಮಾಡಿಕೊಳ್ಳೋಣ ಎಂದು ಹೇಳಿದರು.
ಮಕ್ಕಳ ತಜ್ಞ ಡಾ.ಪ್ರವೀಣ್, ಐಎಂಎ ಅಧ್ಯಕ್ಷ ಡಾ.ಸಾಲಿಮಂಜಪ್ಪ, ಖಾಸಗಿ ವೈದ್ಯರ ಸಂಘದ ಡಾ.ರಂಗಾರೆಡ್ಡಿ, ಜಿಲ್ಲಾ ಕಾರ್ಯಕ್ರಮ ಅನುಷ್ಠಾಧಿಕಾರಿ ಡಾ.ತುಳಸಿರಂಗನಾಥ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಹನುಮಂತಪ್ಪ, ಎಲ್.ಎನ್.ರೆಡ್ಡಿ, ಮೋಹನ್ ಜಬ್ಬಾರ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss