ಯೋಗಾಭ್ಯಾಸವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಿ: ಎಲ್ಲಾ ಭಾಷೆಗಳಲ್ಲಿ ಟ್ವೀಟ್ ಮಾಡಿ ಕರೆ ನೀಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. ಈ ಬೃಹತ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗ ಪ್ರದರ್ಶನ ಮಾಡಲಿದ್ದಾರೆ
ಈ ಮಧ್ಯೆ ಯೋಗದ ಮಹತ್ವದ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲರೂ ಯೋಗಾಭ್ಯಾಸಲ್ಲಿ ತೊಡಗಬೇಕು ಎಂಬ ಮನವಿ ಮಾಡಿಕೊಂಡಿದ್ದಾರೆ.
ಈ ಸಂದೇಶ ಎಲ್ಲರನ್ನೂ ತಲುಪಬೇಕು ಎಂಬ ನಿಟ್ಟಿನಲ್ಲಿ ಅವರು ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿ ಹಲವು ಭಾಷೆಗಳಲ್ಲಿ ಟ್ವೀಟ್​ ಮಾಡಿದ್ದಾರೆ.

‘ಇನ್ನು ಕೆಲವೇ ದಿನಗಳಲ್ಲಿ, ಜಗತ್ತು ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಲಿದೆ. ಯೋಗ ದಿನವನ್ನು ನೀವೆಲ್ಲರೂ ಆಚರಿಸುವಂತೆ ಮತ್ತು ಯೋಗಾಭ್ಯಾಸವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಿ ಎಂದು ನಾನು ಆಗ್ರಹಿಸುವೆ. ಅದರಿಂದ ಆಗುವ ಲಾಭಗಳು ಹಲವಾರು..’ ಎಂದು ಯೋಗ ಇನ್​ ಅವರ್ ಡೈಲಿ ಲೈಪ್ ಎಂಬ ವಿಡಿಯೋ ಮೋದಿ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!