Saturday, September 23, 2023

Latest Posts

‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಅಪ್ಡೇಟ್: ಒಟಿಟಿಯ 100 ಕೋಟಿ ಆಫರ್ ರಿಜೆಕ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಲವಾರು ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಮುಂದೂಡಿವೆ.
ಈ ನಡುವೆ ಸ್ಟಾರ್ ನಟರ ಚಿತ್ರಗಳನ್ನು ಒಟಿಟಿ ಪ್ಲಾಟ್ ಫಾರ್ಮ್ ಗಳು ಕೊಂಡುಕೊಳ್ಳುವ ಪ್ರಯತ್ನ ಮಾಡುತ್ತಿವೆ. ಆ ಪೈಕಿ ಇದೀಗ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾಗೆ ಒಟಿಟಿಯ ಸಂಸ್ಥೆಯೊಂದು 100 ಕೋಟಿಯ ಆಫರ್ ಕೊಟ್ಟಿದೆ. ಆದರೆ ಅಭಿಮಾನಗಳಿಗೆ ಈ ಆಫರ್ ಬೇಸರ ಮೂಡಿಸುವಂತಹದ್ದಾಗಿದ್ದು, ಚಿತ್ರತಂಡ ಕೂಡ ಈ ಒಟಿಟಿ ಆಫರ್ ಅನ್ನು ರಿಜೆಕ್ಟ್ ಮಾಡಿದೆ ಎಂದು ವರದಿಯಾಗಿದೆ.
ಈ ಚಿತ್ರಕ್ಕೆ ಅನೂಪ್ ಭಂಡಾರಿಯ ನಿರ್ದೇಶನವಿದ್ದು, ಶಾಲಿನಿ ಮಂಜುನಾಥ್ ಮತ್ತು ಅಲಂಕಾರ್ ಪಾಂಡಿಯನ್ ಹೂಡಿಕೆ ಮಾಡಿದ್ದಾರೆ. ಕಿಚ್ಚ ಸುದೀಪ್ ಜತೆಗೆ ನೀತಾ ಅಶೋಕ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಕೂಡ ನಟಿಸಿದ್ದಾರೆ.
ಎಲ್ಲಾ ಅಂದುಕೊಂಡಂತೆ ನಡೆದರೆ ಫೆ.24ಕ್ಕೆ ಚಿತ್ರ ತೆರೆ ಮೇಲೆ ಬರಲಿದೆ. ಇಲ್ಲವಾರೆ ಈ ಚಿತ್ರದ ಬಿಡುಗಡೆ ದಿನಾಂಕವೂ ಮುಂದೂಡಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!