ಕೈಗೆಟಕುವ ಚಿಕಿತ್ಸೆ ಸರ್ಕಾರದ ಆದ್ಯತೆ- ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೇಶದಲ್ಲಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವುದು ಸರ್ಕಾರದ ಹೆಚ್ಚಿನ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಪ್ರತಿಪಾದಿಸಿದರು. ಆರೋಗ್ಯ ಸೇವೆಯನ್ನು ಕೈಗೆಟುಕುವ ಮತ್ತು ಸುಲಭವಾಗಿ ಪಡೆಯುವಂತೆ ಮಾಡುವಲ್ಲಿ ತಂತ್ರಜ್ಞಾನದ ಪಾತ್ರ ನಿರಂತರವಾಗಿ ಹೆಚ್ಚುತ್ತಿರುವ ಕಾರಣ ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಗರಿಷ್ಠ ಬಳಕೆಯತ್ತ ಗಮನ ಹರಿಸಲಾಗಿದೆ ಎಂದು ಅವರು ಹೇಳಿದರು.

ಬಜೆಟ್ ನಂತರದ ವೆಬಿನಾರ್‌ ಅನ್ನು ಉದ್ದೇಶಿಸಿ ಇಂದು ʼಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ ಕುರಿತುʼ ಮಾತನಾಡಿದರು. ಕೇಂದ್ರವು ಆರೋಗ್ಯ ಸೇವೆಯನ್ನು ಕೇವಲ ಆರೋಗ್ಯ ಸಚಿವಾಲಯಕ್ಕೆ ಸೀಮಿತಗೊಳಿಸಿಲ್ಲ, ಸಂಪೂರ್ಣ ಸರ್ಕಾರದ ವಿಧಾನಕ್ಕೆ ಒತ್ತು ನೀಡಿದೆ ಎಂದು ಮಾಹಿತಿ ನೀಡಿದರು.

ಕಳೆದ ವರ್ಷಗಳಲ್ಲಿ 260 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗಿದ್ದು, 2014 ರ ನಂತರ ವೈದ್ಯಕೀಯ ಸೀಟುಗಳ ಸಂಖ್ಯೆ ದ್ವಿಗುಣಗೊಂಡಿದೆ. ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ತೆರೆಯುವುದು ವೈದ್ಯಕೀಯ ಮಾನವ ಸಂಪನ್ಮೂಲಕ್ಕೆ ಒಂದು ದೊಡ್ಡ ಹೆಜ್ಜೆಯಾಗಿದೆ ಎಂದರು.

ಆಯುಷ್ಮಾನ್ ಭಾರತ್ ಯೋಜನೆಯು 80 ಸಾವಿರ ಕೋಟಿ ಖರ್ಚು ಮಾಡುವುದನ್ನು ಉಳಿಸಿದೆ. ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಈ ವರ್ಷ ಕೇಂದ್ರ ಬಜೆಟ್‌ನಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗಿದೆ. ನಾಗರಿಕರ ಮನೆಗಳ ಬಳಿ ಪರೀಕ್ಷಾ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರಥಮ ಚಿಕಿತ್ಸೆಗಾಗಿ ಉತ್ತಮ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಗಮನಹರಿಸುತ್ತಿದೆ ಎಂದು ಮೋದಿ ತಿಳಿಸಿದರು.

COVID-19 ಕುರಿತು ಮಾತನಾಡಿದ ಅವರು, ಸಾಂಕ್ರಾಮಿಕ ಸಮಯದಲ್ಲಿ ಭಾರತದ ಫಾರ್ಮಾ ಕ್ಷೇತ್ರವು ಇಡೀ ಪ್ರಪಂಚದ ವಿಶ್ವಾಸವನ್ನು ಗಳಿಸಿದ ರೀತಿ ಅಭೂತಪೂರ್ವವಾಗಿದೆ. ಸರಬರಾಜು ಸರಪಳಿಯು ಬಹಳ ಮುಖ್ಯವಾದ ವಿಷಯ ಎಂದು ಸಾಂಕ್ರಾಮಿಕ ರೋಗದಿಂದ ಕಲಿತಿದ್ದೇವೆ ಎಂದರು.

ಆರೋಗ್ಯ ಕ್ಷೇತ್ರದಲ್ಲಿ ವಿದೇಶಗಳ ಮೇಲೆ ಭಾರತದ ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಪುರಾವೆ ಆಧಾರಿತ ಸಂಶೋಧನೆಯನ್ನು ಬಲಪಡಿಸಲು ಆರೋಗ್ಯ ಕ್ಷೇತ್ರದ ಎಲ್ಲ ಪಾಲುದಾರರನ್ನು, ವಿಶೇಷವಾಗಿ ಆಯುರ್ವೇದವನ್ನು ಪ್ರಧಾನಿ ಮೋದಿ ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!