ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಮಕ್ಕಳ ಸಂತೆ ಕಾರ್ಯಕ್ರಮ ನಡೆಯಿತು.
ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು ತರಕಾರಿ, ಹೋಟೆಲ್, ಅಮೃತ್ ಟೀ ಸ್ಟಾಲ್, ವಾಚ್ ಅಂಗಡಿ, ಪಾನಿ ಪೂರಿ ಅಂಗಡಿ, ಮೆಡಿಕಲ್ ಅಂಗಡಿ, ಬಟ್ಟೆ ಅಂಗಡಿ, ಧಾನ್ಯಗಳ ಅಂಗಡಿ, ಹೂವಿನ ಅಂಗಡಿ, ಸ್ಟೇಷನರಿ ಅಂಗಡಿಗಳ, ಬೇಕರಿ, ಕ್ರೀಡಾ ಅಂಗಡಿ ಸೇರಿದಂತೆ ಹಲವು ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು.