ಬಾಲಿವುಡ್ ನಟಿ ಮಲೈಕಾ ಅರೋರಾ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಬಾಲಿವುಡ್  ನಟಿ ಮಲೈಕಾ ಅರೋರಾ ಅವರಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮುಂಬೈನಲ್ಲಿ ಡೆದಿದೆ. ಘಟನೆಯಲ್ಲಿ ಮಲೈಕಾ ಅವರ ತಲೆಗೆ ಪೆಟ್ಟು ಬಿದ್ದಿದೆ. ಕಣ್ಣಿಗೂ ಸಹ ಗಾಯ ಆಗಿದೆ ಎನ್ನಲಾಗುತ್ತಿದೆ. ಸದ್ಯ ಮಲೈಕಾ ಅವರನ್ನು ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುಣೆಯಲ್ಲಿ ಆಯೋಜಿಸಿದ್ದ ಫ್ಯಾಷನ್​ ಇವೆಂಟ್​ ಮುಗಿಸಿಕೊಂಡು ವಾಪಸ್​ ಬರುವಾಗ ಈ ಅಪಘಾತ  ಸಂಭವಿಸಿದೆ.
ಆಕ್ಸಿಡೆಂಟ್​ನಿಂದ ಜಖಂ ಆಗಿರುವ ಕಾರಿನ ಫೋಟೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಮಲೈಕಾ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಪ್ರಾರ್ಥಿಸುತ್ತಿದ್ದಾರೆ.
ಈ ಅಪಘಾತಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!