ಮಲೈಕಾ, ಅರ್ಜುನ್ ಬ್ರೇಕಪ್ ವಂದತಿಗೆ ಬ್ರೇಕ್ ಹಾಕಿದ ಮ್ಯಾನೇಜರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಇದೀಗ ಇಬ್ಬರು ಬ್ರೇಕ್ ಆಪ್ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದ್ದು, ಈ ನಡುವೆ ಮಲೈಕಾ ಅರೋರಾ ಮ್ಯಾನೇಜರ್ ಪ್ರತಿಕ್ರಿಯೆ ನೀಡಿದ್ದಾರೆ.

ಮಲೈರಾ ಅರೋರಾ ಮತ್ತು ಅರ್ಜುನ್ ಕಪೂರ್ ಬ್ರೇಕಪ್ ವದಂತಿಯನ್ನು ನಟಿಯ ಮ್ಯಾನೇಜರ್ ಅಲ್ಲಗೆಳೆದಿದ್ದಾರೆ. ಇಬ್ಬರ ಬ್ರೇಕಪ್ ಸುದ್ದಿ ನಿಜನಾ ಎಂದು ಕೇಳಲಾದ ಪ್ರಶ್ನೆಗೆ ಇಲ್ಲ ಇದು ವದಂತಿ ಅಷ್ಟೇ ಎಂದು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಅಂದಹಾಗೆ, ಬಿಟೌನ್ ಅಂಗಳದ ಅಚ್ಚು ಮೆಚ್ಚಿನ ಜೋಡಿಗಳಲ್ಲಿ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಕೂಡ ಒಬ್ಬರಾಗಿದ್ದರು. ಸಾಕಷ್ಟು ವರ್ಷಗಳಿಂದ ಲಿವ್ ಇನ್ ರಿಲೇಷನ್ ಶಿಪ್‌ನಲ್ಲಿರೋ ಈ ಜೋಡಿ, ಭವಿಷ್ಯದಲ್ಲಿ ಒಟ್ಟಿಗೆ ಇರುವ ಆಲೋಚನೆ ಕುರಿತು ನಟಿ ಮಲೈಕಾ ಸಾಕಷ್ಟು ಬಾರಿ ಹೇಳಿಕೊಂಡಿದ್ದರು.

ನಟಿ ಮಲೈಕಾ ಅರ್ಜುನ್ ಕಪೂರ್‌ಗಿಂತ ವಯಸ್ಸಿನಲ್ಲಿ ದೊಡ್ಡವರು, ಇವರ ಲವ್ವಿ ಡವ್ವಿ ನೋಡಿರೋ ನೆಟ್ಟಿಗರು ಅದೆಷ್ಟೋ ಬಾರಿ ಇವರಿಬ್ಬರದ್ದು ಟೈಮ್ ಪಾಸ್ ಲವ್ ಎಂದು ಹೇಳಿದ್ದು ಇದೆ. ಆದರೆ ಈ ಹಿಂದೆ ಮಲೈಕಾ ತಮ್ಮ ಪ್ರೀತಿಯ ಜೀವನದ ಕುರಿತು ಮನಬಿಚ್ಚಿ ಸಂದರ್ಶನವೊಂದರಲ್ಲಿ ಮಾತಾನಾಡಿದ್ದರು.ನಾವು ಒಟ್ಟಿಗೆ ಭವಿಷ್ಯವನ್ನು ಕಳೆಯುವ ವಿಚಾರ ನಮಗೆಷ್ಟೇ ತಿಳಿದಿರಬೇಕು ಎಂದು ಗೆಳೆಯನ ಜೊತೆ ಭವಿಷ್ಯವನ್ನು ಒಟ್ಟಿಗೆ ಕಳೆಯುವ ಆಸೆಯನ್ನು ವ್ಯಕ್ತಪಡಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!