ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.
ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್‌ಪಿ ಅರ್ಜಿ ವಜಾಗೊಳಿಸಬೇಕು ಎನ್ನುವ ಮಸೀದಿ ಆಡಳಿತ ಮಂಡಳಿ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸಮೀಕ್ಷೆ ನಡೆಸಬೇಕು ಎಂದು ವಿಎಚ್‌ಪಿ ತನ್ನ ಅರ್ಜಿಯಲ್ಲಿ ಮನವಿ ಸಲ್ಲಿಸಿತ್ತು. ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು, ಜನವರಿ 8, 2023ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ. ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ನೀಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇದನ್ನು ಮಸೀದಿ ಆಡಳಿತ ಮಂಡಳಿ ಹಾಗೂ ಮುಸ್ಲಿಂ ಸಂಘಟನೆಗಳು ವಿರೋಧಿಸಿದ್ದವು. ಇದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ನ್ಯಾಯಾಲಯಕ್ಕೆ ಇಲ್ಲ ಎಂದು ಹೇಳಿದ್ದವು.