ಮಳಲಿ ಮಸೀದಿ ವಿವಾದ: ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆಮಂಗಳೂರಿನ ಕೋರ್ಟ್ ತೀರ್ಪನ್ನು ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!