ಮಲೆನಾಡಿಗರಿಗೆ ಮತ್ತೆ ಮಂಗನಕಾಯಿಲೆ ಭೀತಿ, ಆರೋಗ್ಯ ಇಲಾಖೆಯಿಂದ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಮತ್ತೆ ಆವರಿಸಿದೆ. ವರ್ಷಪೂರ್ತಿ ದಾಖಲೆ ಮಳೆ ಸುರಿಯುವ ಚಿಕ್ಕಮ ಈ ವರ್ಷ ಜನವರಿಯಲ್ಲಿ ಮಂಗನ ಕಾಯಿಲೆ ಆತಂಕ ಎದುರಾಗಿದೆ.

ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಂಗನ ಕಾಯಿಲೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿದೆ.‌ ತೀವ್ರ ಜ್ವರದಿಂದ‌ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ಬಂದಿರುವ ದೃಢವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಿ‌ ಮಂಗನ ಕಾಯಿಲೆ‌ ಪತ್ತೆಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ಮತ್ತಿಖಂಡ‌ ಗ್ರಾಮದಲ್ಲಿ ಉಣ್ಣೆಗಳನ್ನ ಸಂಗ್ರಹ ಮಾಡಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!