ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಮೃತಪಟ್ಟಿದ್ದಾನೆ.
ನಮೀಬ್ ಮಾಂತೆ ಮೃತ ವಿದ್ಯಾರ್ಥಿ. ಈ ಮೂಲಕ ಮೃತ ವಿದ್ಯಾರ್ಥಿಗಳ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಉಳಿದ 46 ಮಂದಿಯ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದೆ.
ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳ ಪೈಕಿ 6ನೇ ತರಗತಿ ವಿದ್ಯಾರ್ಥಿ, ಮೇಘಾಲಯದ ಕಿರ್ಶನ್ ಲ್ಯಾಂಗ್ (13) ಭಾನುವಾರ ಮೃತಪಟ್ಟಿದ್ದ.
ಈ ಪ್ರಕರಣದ ಭೇದಿಸಲು ಮಳವಳ್ಳಿ ಡಿವೈಎಸ್ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಆಕಸ್ಮಿಕವಾಗಿ ಆಹಾರ ಪದಾರ್ಥಗಳಿಂದ ಫುಡ್ ಪಾಯಿಸನ್ ಆಗಿದ್ಯಾ? ಅಥವಾ ಉದ್ದೇಶ ಪೂರ್ವಕವಾಗಿ ಯಾರೋ ಊಟವನ್ನು ಕಲುಷಿತ ಮಾಡಿದ್ದಾರಾ ಎಂಬುದರ ಬಗ್ಗೆ ಖುದ್ದು ಮಂಡ್ಯ ಎಸ್ಪಿ ಮಾರ್ಗದರ್ಶನದಲ್ಲಿ ತನಿಖೆ ನಡೆಯಲಿದೆ.