ಮಳವಳ್ಳಿಯ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ 638 ಪುಟಗಳ ಜಾಜ್‌ಶೀಟ್ ಸಲ್ಲಿಕೆ

ಹೊಸ ದಿಗಂತ ವರದಿ, ಮಂಡ್ಯ :

ಟ್ಯೂಷನ್‌ಗೆ ತೆರಳಿದ್ದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್‌ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.
ಕಳೆದ ಅ. 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್‌ಗೆ ಬರುವಂತೆ ಹೇಳಿ, 10 ವರ್ಷ ವಯಸ್ಸಿನ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದು ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಶವವನ್ನು ಬಿಸಾಡಿ ಪರಾರಿಯಾಗಿದ್ದ.
ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಿದ್ದ. ಈ ಬಗ್ಗೆ ತನಿಖೆ ನಡೆಸಿದ್ದ ಡಿವೈಎಸ್ಪಿ ನವೀನ್‌ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ಪೂರೈಸಿ 15ದಿನಗಳಲ್ಲೇ ನ್ಯಾಯಾಲಯಕ್ಕೆ ಆತನ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ.
ಪೊಲೀಸರ ಕಾರ‌್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!