Thursday, March 23, 2023

Latest Posts

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಮಲಯಾಳಂ ನಟ ಕೊಟ್ಟಾಯಂ ನಜೀರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲಯಾಳಂ ನಟ ಕೊಟ್ಟಾಯಂ ನಜೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೊಟ್ಟಾಯಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗಿದೆ. ಇದೀಗ ಅವರನ್ನು ಐಸಿಯುನಿಂದ ಖಾಸಗಿ ಕೋಣೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಅವರು ಸ್ಥಿರವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೊಟ್ಟಾಯಂ ನಜೀರ್ ಮಿಮಿಕ್ರಿ ಕಲಾವಿದರಾಗಿ ಮತ್ತು ರಂಗ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಮಿಮಿಕ್ಸ್ ಆಕ್ಷನ್ 500(1995) ಚಿತ್ರದ ಮೂಲಕ ನಜೀರ್ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಅವರು ತಮ್ಮ ಎರಡು ದಶಕಗಳ ವೃತ್ತಿಜೀವನದಲ್ಲಿ 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ಮಮ್ಮುಟ್ಟಿ ಅಭಿನಯದ ರೋರ್ಸ್‌ಚಾಚ್‌ನಲ್ಲಿ ನಟ ಕೊನೆಯದಾಗಿ ಕಾಣಿಸಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!