ಮಲಯಾಳಂ ನಟ ಕುಂದರ ಜಾನಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಲಯಾಳಂ ಖ್ಯಾತ ನಟ ಕುಂದರ ಜಾನಿ (71) ವಿಧಿವಶರಾಗಿದ್ದಾರೆ.

ಮಂಗಳವಾರ ರಾತ್ರಿ ಅಸ್ವಸ್ಥರಾಗಿದ್ದ ಅವರನ್ನು ಕೇರಳದ ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಇಂದು ಬೆಳಗ್ಗೆ 9:30ರ ಸುಮಾರಿಗೆ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಹೃದಯಾಘಾತದಿಂದ ಜಾನಿ ಅವರು ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.

ಮಲಯಾಳಂ ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಮಿಂಚಿದ್ದ ಅವರು, ತಮ್ಮ ಸಿನಿಮಾ ಪಯಣವನ್ನು 1979ರಲ್ಲಿ ಆರಂಭಿಸಿದ್ದರು.

ಜಾನಿ ಅವರು ಕೊನೆಯದಾಗಿ 2022ರಲ್ಲಿ ಬಿಡುಗಡೆಯಾದ ಮೆಪ್ಪಾಡಿಯನ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

44 ವರ್ಷಗಳ ಚಿತ್ರರಂಗದ ಅವಧಿಯಲ್ಲಿ ಜಾನಿ ಅವರು ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದಾರೆ. ನಟನ ಅಗಲಿಕೆಗೆ ಚಿತ್ರರಂಗ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!