ಹೊಸ ದಿಗಂತ ಡಿಜಿಟಲ್ ಡೆಸ್ಕ್:
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ದೆಹಲಿಯಲ್ಲಿ ನಡೆಯಿತು.
ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ ಮಾಡಿದರು.
ಮೋಹನ್ ಲಾಲ್ ವೇದಿಕೆಯತ್ತ ನಡೆಯುತ್ತಿದ್ದಂತೆ, ಸಭಾಂಗಣವು ಚಪ್ಪಾಳೆಯೊಂದಿಗೆ ಸುರಿಮಳೆಗೈದಿತು.