ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಆಸ್ಪತ್ರೆ ಯಿಂದ ಇಂದು ಮನೆಗೆ ವಾಪಸ್ಸಾಗಿದ್ದಾರೆ.
ಮೊನ್ನೆಯಷ್ಟೇ ಶೂಟಿಂಗ್ ವೇಳೆ ಬಲಗಾಲಿಗೆ ಏಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಬಳಿಕ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿದುಕೊಂಡು ಶಸ್ತ್ರ ಚಿಕಿತ್ಸೆಯಲ್ಲಿ ಭಾಗಿಯಾಗಿದ್ದಾರೆ ನಟ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದದ್ದು, ಇದೀಗ ಅವರು ಮನೆಗೆ ವಾಪಸ್ಸಾಗಿದ್ದಾರೆ.
ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಅವರು ತೀವ್ರವಾಗಿ ಗಾಯ ಮಾಡಿಕೊಂಡಿದ್ದರು. ಈ ಅವಘಡ (Avaghada) ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ತಿಳಿಸಿರುವುದಾಗಿ ಅಭಿಮಾನಿಗಳಿಗೆ ಹೇಳಲಾಗಿತ್ತು.
ಸೋಷಿಯಲ್ ಮೀಡಿಯಾದಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದು, ‘ನೋವಿನ ವಿರುದ್ಧ ಹೋರಾಡಿ, ಗೆದ್ದು ಮತ್ತೆ ನಾನು ಬರುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಹಲವು ತಿಂಗಳ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುವೆ’ ಎಂದಿದ್ದಾರೆ ಪೃಥ್ವಿರಾಜ್.