ಶಾಲಾ ಬಾಲಕಿಯರ ಜೊತೆ ಅಶ್ಲೀಲ‌ ವರ್ತನೆ: ಖ್ಯಾತ ನಟ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಶಾಲಾ ಬಾಲಕಿಯರ ಮುಂದೆ ಗುಪ್ತಾಂಗವನ್ನು ಪ್ರದರ್ಶಿಸಿದ ಆರೋಪದಡಿ ಮಲಯಾಳಂ ನಟ ಶ್ರೀಜಿತ್ ರವಿಯನ್ನು ಬಂಧಿಸಲಾಗಿದೆ.
ಜುಲೈ 4 ರಂದು ತ್ರಿಶೂರ್‌ನ ಅಯ್ಯಂತೋಲ್‌ನ ಎಸ್‌ಎನ್ ಪಾರ್ಕ್‌ನಲ್ಲಿ 9 ಮತ್ತು 14 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮುಂದೆ ರವಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ ತ್ರಿಶೂರ್ ಪಶ್ಚಿಮ ಪೊಲೀಸರು ಪೋಕ್ಸೋ ಕಾಯ್ಗದೆಯಡಿ ಅವರನ್ನು ಬಂಧಿಸಿದ್ದಾರೆ.
ನಟ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಗುರಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2016ರಲ್ಲಿ ಇಂತಹದ್ದೇ ಪ್ರಕರಣದಲ್ಲಿ ಒಟ್ಟಪ್ಪಲಂ ಪೊಲೀಸರು ರವಿಯನ್ನು ಬಂಧಿಸಿದ್ದರು. ಬಿಡುಗಡೆ ಬಳಿಕ ಶ್ರೀಜಿತ್ ರವಿ ಹಲವಾರು ಮಲಯಾಳಂ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಮಾನ್ಯವಾಗಿ ಪೋಷಕ ಪಾತ್ರಗಳು ಮತ್ತು ಖಳನಾಯಕನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ನಟ, 2016 ರಿಂದೀಚೆಗೆ ಗೋಧಾ, ರಾಮಲೀಲಾ ಸೇರಿದಂತೆ ಪ್ರಖ್ಯಾತ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!