Thursday, August 11, 2022

Latest Posts

ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಖ್ಯಾತ ಮಲಯಾಳಂ ನಟಿ ಮತ್ತು ರಂಗಭೂಮಿ ಕಲಾವಿದೆ ಕೆಪಿಎಸಿ ಲಲಿತಾ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಕೇರಳದ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ 5 ದಶಕಗಳ ವೃತ್ತಿಜೀವನದಲ್ಲಿ ತಮಿಳು, ಮಳಯಾಳಂ ಸೇರಿ ಒಟ್ಟು 550ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕೇರಳ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಲಲಿತಾ ಅವರಿಗೆ ನಾಲ್ಕು ಬಾರಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಹಾಗೂ ಅತ್ಯುತ್ತಮ ಪೋಷಕ ನಟಿ ಎಂದು ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಿದೆ.
1999ರಲ್ಲಿ ನಟಿಸಿದ ಅಮರಂ ಹಾಗೂ 2000ರಲ್ಲಿ ತೆರೆಕಂಡ ಶಾಂತಂ ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss