ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ (45) ಹೊಟೇಲ್ ಬಳಿ ನಿಲ್ಲಿಸಿದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಟ್ಟಾಯಂ ನಲ್ಲಿರುವ ಪಂಪಾಡಿ ಸಮೀಪದ ಹೋಟೆಲೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ನಟ ಶವವಾಗಿ ಪತ್ತೆಯಾಗಿದ್ದು, ಹೊಟೇಲ್ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ವಿನೋದ್ ಅವರ ದೇಹವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪೊಲೀಸರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಟನ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆಯ ಬಳಿಕವೇ ನಿಖರ ಮಾಹಿತಿ ಹೊರಬೀಳಲಿದೆ.