ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಮಂಗಳವಾರ ಕಮಾಂಡೇಷನ್ ಪ್ರಶಂಸಾ ಪದಕ ನೀಡಿ ಗೌರವಿಸಿದರು.
ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಶ್ರೇಣಿಯನ್ನು ಹೊಂದಿರುವ ಮೋಹನ್ ಲಾಲ್ ಅವರು, ಸೇನಾ ಮುಖ್ಯಸ್ಥರಿಂದ ಪ್ರಶಂಸೆಯನ್ನು ಪಡೆಯುವುದು ‘ಅತ್ಯಂತ ಗೌರವ’ ಎಂದು ಹೇಳಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಸೇನೆಗಾಗಿ ಮತ್ತು ನಾಗರಿಕರ ಸುಧಾರಣೆಗಾಗಿ ತಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಪ್ರಾದೇಶಿಕ ಸೇನಾ ಬೆಟಾಲಿಯನ್‌ಗಳಿಗೆ ಹೆಚ್ಚಿನ ದಕ್ಷತೆಯನ್ನು ಹೇಗೆ ತರುವುದು ಮತ್ತು ದೇಶಕ್ಕಾಗಿ ಏನು ಮಾಡಬಹುದು ಎಂಬುದರ ಕುರಿತು ನಾನು ಮತ್ತು ಸೇನಾ ಮುಖ್ಯಸ್ಥರು ಚರ್ಚಿಸಿದ್ದೇವೆ ಎಂದು ಅವರು ಹೇಳಿದರು.