ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿ: ಫೈನಲ್‌ನಲ್ಲಿ ಪಿ.ವಿ ಸಿಂಧುಗೆ ಸೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೇಷ್ಯಾ ಮಾಸ್ಟರ್ಸ್ (Malaysia Masters 2024) ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಪಿ.ವಿ ಸಿಂಧು (PV Sindhu) ಅವರು ಚೀನಾದ ವಾಂಗ್ ಝಿಯಿ ವಿರುದ್ಧ ಸೋತು ನಿರಾಸೆ ಮೂಡಿಸಿದ್ದಾರೆ.

ಚೀನಾದ ಪ್ರತಿಸ್ಪರ್ಧಿ ವಾಂಗ್ ಝಿಯಿ ವಿರುದ್ಧ 16-21, 21-5, 21-16 ಸೆಟ್‌ಗಳಿಂದ ಸಿಂಧು ಸೋಲು ಕಂಡಿದ್ದಾರೆ.

ಮೊದಲ ಸೆಟ್‌ನಲ್ಲಿ 21-16 ಪಾಯಿಂಟ್ಸ್‌ ಗಳಿಸುವ ಮೂಲಕ 5 ಪಾಯಿಂಟ್ಸ್‌ಗಳಲ್ಲಿ ಮುನ್ನಡೆ ಸಾಧಿಸಿದ್ದ ಪಿ.ವಿ ಸಿಂಧು ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದ್ರೆ 2ನೇ ಸೆಟ್‌ನಲ್ಲಿ ಚೀನಾದ ಆಟಗಾರ್ತಿ ಭರ್ಜರಿ ಕಮ್‌ಬ್ಯಾಕ್ ಮಾಡಿದರು. ಇದರಿಂದ ಸಿಂಧು 5-21 ಪಾಯಿಂಟ್ಸ್‌ ಗಳಿಸಿ ತೀವ್ರ ಹಿನ್ನಡೆ ಅನುಭವಿಸಿದ್ದರು. ಬಳಿಕ 3ನೇ ಸೆಟ್‌ನಲ್ಲೂ ಸಿಂಧುಗೆ ಅವಕಾಶ ನೀಡದ ವಾಂಗ್ ಝಿಯಿ 21-16 ಪಾಯಿಂಟ್ಸ್‌ಗಳಿಂದ ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟರು.

ಶನಿವಾರ ನಡೆದಿದ್ದ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ (Busanan Ongbamrungphan) ವಿರುದ್ಧ ಸಿಂಧು 13-21, 21-16, 21-12 ಸೆಟ್‌ಗಳಿಂದ ಗೆಲುವು ಸಾಧಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!