ಪ್ರವಾಸಿಗರಿಲ್ಲದ ಮಾಲ್ಡೀವ್ಸ್: ಭಾರತದಲ್ಲಿ ರೋಡ್‌ ಶೋ ನಡೆಸಲು ಪ್ಲಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಜೊತೆಗಿನ ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ಬಳಿಕ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‌ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಸಂಸ್ಥೆ (Maldivian tourism body) ಹೇಳಿದೆ.

ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ (MATATO) ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು (Road Show In India) ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ.

ಪ್ರವಾಸೋದ್ಯಮದಲ್ಲಿ ಕುಸಿತ ಕಂಡ ಹಿನ್ನೆಲೆ ಸಂಸ್ಥೆಯನ್ನು ಮತ್ತಷ್ಟು ಉತ್ತೇಜಿಸಲು ಭಾರತದಾದ್ಯಂತದ ಪ್ರಮುಖ ಪ್ರವಾಸಿ ಸಂಘಗಳು ಮತ್ತು ಉದ್ಯಮದ ಪಾಲುದಾರರೊಂದಿಗೆ ಪಾಲುದಾರಿಕೆಯನ್ನು ಹೊಂದಲು ಅವರು ಎದುರು ನೋಡುತ್ತಿದ್ದಾರೆ ಎಂದು MATATO ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಸ್ತುತ ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ಪ್ರಾರಂಭಿಸಲು ಮತ್ತು ಮುಂಬರುವ ತಿಂಗಳುಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಯೋಜನೆಗಳು ನಡೆಯುತ್ತಿವೆ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಂಸ್ಥೆಯಿಂದ ತಿಳಿಸಿದೆ.

ಜನವರಿ 6 ರಂದು ಲಕ್ಷ ದ್ವೀಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಲ್ಡೀವ್ಸ್‌ನ ಮೂವರು ಸಚಿವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಮಾಲ್ಡೀವ್ಸ್‌ಗೆ ಭೇಟಿ ನೀಡುವವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತ 6ನೇ ಸ್ಥಾನಕ್ಕೆ ಕುಸಿದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!