ಕೋಲಾರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಸ್ಪರ್ಧೆ: ಮಾಜಿ ಪ್ರಧಾನಿ ದೇವೇಗೌಡ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕೋಲಾರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಎಂದು ಮಾಜಿ ಪ್ರಧಾನಿ ದೇವೇಗೌಡ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋಲಾರಕ್ಕೆ ಬೇರೆಯವರು ಬರುವ ಚಾನ್ಸ್ ಪ್ರಶ್ನೆಯೇ ಇಲ್ಲ, ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಂಡ್ಯ, ಕೋಲಾರ, ಹಾಸನ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು, ಸಂಜೆ ವೇಳೆಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗುವುದು ಎಂದರು.

ಇದೀಗ ಕೋಲಾರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದ್ದು, ಮಂಡ್ಯ , ಹಾಸನದಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬುದು ಅಧಿಕೃತವಾಗಬೇಕಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!