ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ: ಸ್ಫೋಟಕ್ಕೆ ಉಗ್ರರ ಸಂಚು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸುರಕ್ಷತೆ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮಲ್ಲೇಶ್ವರ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾದ ಬೆನ್ನಲ್ಲೇ ಬಿಜೆಪಿ ಕಚೇರಿ ಎದುರು ಮೆಟಲ್ ಡಿಟೆಕ್ಟರ್  ಅಳವಡಿಕೆ ಮಾಡಲಾಗಿದೆ.

ಮೆಟಲ್ ಡಿಟೆಕ್ಟರ್ ಮೂಲಕವೇ ಬಿಜೆಪಿ ಕಚೇರಿಗೆ ಭೇಟಿಗೆ ಬರುವವರ ಒಳ ಪ್ರವೇಶ ಕಡ್ಡಾಯ ಮಾಡಲಾಗಿದೆ. ಇದರ ಜತೆಗೆ ಪ್ರವೇಶ ದ್ವಾರದ ಎದುರು 3-4 ಜನ ಹೆಚ್ಚುವರಿ ಪೊಲೀಸರನ್ನು ನಿಯೋಜಿಲಾಗಿದೆ.

ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ಐಸಿಸ್‌ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಶಾಕಿಂಗ್‌ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿತ್ತು.

ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್‌ ಹುಸೇನ್‌ ಶಾಜಿದ್‌, ಅಬ್ದುಲ್‌ ಮತೀನ್‌ ತಾಹ, ಮಾಜ್‌ ಮುನೀರ್‌ ಅಹಮದ್‌, ಮುಜಾಮಿಲ್‌ ಷರೀಫ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here