Sunday, November 27, 2022

Latest Posts

ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ರ ಡೆಸ್ಕ್:‌ 

ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಗ್ಗೆ 10.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಖರ್ಗೆ ಅವರಿಗೆ ಚುನಾವಣಾ ಪ್ರಮಾಣಪತ್ರ ನೀಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಿಂದ ವಿರಾಮ ತೆಗೆದುಕೊಂಡು ಈಗಾಗಲೇ ದೆಹಲಿಗೆ ತೆರಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಸಂಸದರು, ಪಿಸಿಸಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು, ಮಾಜಿ ಸಿಎಂಗಳು, ಮಾಜಿ ಪಿಸಿಸಿ ಅಧ್ಯಕ್ಷರು ಮತ್ತು ಇತರ ಎಐಸಿಸಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ.  ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ಸಭೆಗೆ ಗೈರು ಹಾಜರಾಗುವ ಸಾಧ್ಯತೆ ಇದೆ.

ಸುಮಾರು ಎರಡು ದಶಕಗಳ ನಂತರ ಮೊದಲ ಬಾರಿಗೆ ಗಾಂಧಿ ಕುಟುಂಬೇತರ ನಾಯಕರೊಬ್ಬರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಶಶಿ ತರೂರ್ ವಿರುದ್ಧ 7,897 ಮತಗಳೊಂದಿಗೆ ಖರ್ಗೆ ಗೆಲುವು ಸಾಧಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ  ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ಬಾರಿಗೆ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!