ರಾಷ್ಟ್ರಪತಿ ಪ್ರಮಾಣ ವಚನದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಅಗೌರವ: ಕಾಂಗ್ರೆಸ್ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಗೌರವ ತೋರಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಈ ಕುರಿತು ರಾಜ್ಯಸಭೆ ಅಧ್ಯಕ್ಷರಿಗೆ ಪತ್ರ ಬರೆದ ಕಾಂಗ್ರೆಸ್ ಸದಸ್ಯರು, ಖರ್ಗೆಯವರಿಗೆ ಸರಿಯಾದ ಸ್ಥಳ ನಿಯುಕ್ತಿ ಮಾಡಿಲ್ಲ,ಬೇರೊಂದು ಕುರ್ಚಿಯಲ್ಲಿ ಅವರನ್ನ ಕೂರಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಪ್ರೋಟೋಕಾಲ್ ಪ್ರಕಾರ ಅವರಿಗೆ ಸ್ಥಳ ನೀಡಲಾಗಿಲ್ಲ. ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರು, ಮೇಲಾಗಿ ಹಿರಿಯ ರಾಜಕಾರಣಿ,ಮುತ್ಸದಿ ಅಂತಹವರಿಗೆ ಈ ರೀತಿ ಅಗೌರವ ತೋರಿದ್ದು ಸರಿಯಲ್ಲ ಎಂದು ರಾಜ್ಯಸಭೆ ಅಧ್ಯಕ್ಷರಿಗೆ ಪತ್ರ ಬರೆದು ಕಾಂಗ್ರೆಸ್ ಸದದ್ಯರು ಅಸಮಾಧಾನ ಹೊರ ಹಾಕಿದ್ದಾರೆ.
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಇತರ ಪ್ರಮುಖ ವಿಪಕ್ಷ ನಾಯಕರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!