ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಆರೋಪದ ಮೇಲೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.
ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಕಲಬುರ್ಗಿ ಪೊಲೀಸ್ ಆಯುಕ್ತ ಆರ್.ಚೇತನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ಅವಾಚ್ಯ ಶಬ್ಧಗಳಿಂದ ಮಲ್ಲಿಕಾರ್ಜುನ ಖರ್ಗೆಗೆ ನಿಂದಿಸಿದ್ದಾರೆ. ಈ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಿರಾವ, ರಾಯಚೂರಿನಲ್ಲಿ ನಡೆದ ನಮೋ ಭಾರತ್ ಎಂಬ ಕಾರ್ಯಕ್ರಮದಲ್ಲಿ ಖರ್ಗೆ ಕುಟುಂಬದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಹಿಂಸಾತ್ಮಕವಾಗಿ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸಿದ್ದಕ್ಕೆ ಖರ್ಗೆ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.
ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗಿದ್ದು ಖರ್ಗೆ ಸಾಹೇಬರ ಕಾಲದಲ್ಲಿ. ಈ ಚಿತ್ರವು ಆಸ್ಪತ್ರೆಯ ಮೇಲ್ಛಾವಣಿಯಲ್ಲಿರುವ ಡ್ರೋನ್ ಕ್ಯಾಮೆರಾದಿಂದ ಕಂಡುಬಂದಿದೆ. ಮೊದಲ ಅಕ್ಷರ ಖ, ಎರಡನೇ ಅಕ್ಷರ ಗ, ಮೇಲಿನ ಅರ್ಧ ಅಕ್ಷರ ಖರ್ಗೆ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತಾ ಕಾಣಬೇಕು. ನಿರ್ಮಾಣ ಪೂರ್ಣಗೊಳ್ಳುವವರೆಗೆ ಅವರ ಹೆಸರು ಉಳಿಯುತ್ತದೆ ಎಂದು ಈ ರೀತಿ ಮಾಡಲಾಗಿದೆ. ಇದು ಅವರ ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು. ಸದ್ಯ ಈ ಸಂಬಂದ ದೂರು ದಾಖಲಾಗಿದೆ..