I.N.D.I.A ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಸ್ತಾಪ ಮಾಡಿದ್ದಾರೆ.

ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಚರ್ಚಿಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಇನ್ನು ಬ್ಯಾನರ್ಜಿ ಅವರ ಮಾತಿಗೆ ಆಮ್‌ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕೂಡ ಬೆಂಬಲಿಸಿದ್ದಾರೆ.

ಭಾರತ ಮೈತ್ರಿಕೂಟದ ನಾಲ್ಕನೇ ಸಭೆ ದೆಹಲಿಯ ಅಶೋಕ ಹೋಟೆಲ್‌ನಲ್ಲಿ ನಡೆದಿದೆ. ಈ ಸಭೆಗೆ ಸೋಮವಾರದಿಂದಲೇ ಹಲವು ವಿರೋಧ ಪಕ್ಷಗಳ ನಾಯಕರು ರಾಜಧಾನಿ ತಲುಪಿದ್ದರು. ಈ ಮೈತ್ರಿಕೂಟದ ಮೊದಲ ಮೂರು ಸಭೆಗಳು ಕ್ರಮವಾಗಿ ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದವು. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಜೆಡಿಯು ನಾಯಕ ನಿತೀಶ್ ಕುಮಾರ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ದೆಹಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಒಟ್ಟು ಸಭೆಯಲ್ಲಿ 28 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಇಂಡಿ ಒಕ್ಕೂಟ ದೇಶಾದ್ಯಂತ 8-10 ಸಾರ್ವಜನಿಕ ಸಭೆಗಳನ್ನು ನಡೆಸಲಿದೆ. ಜನವರಿ 30 ರಂದು ಇಂಡಿ ಒಕ್ಕೂಟದ ಮೊದಲ ಜಂಟಿ ರಾಲಿ ನಡೆಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!