ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.
ಜಾರ್ಖಂಡ್ ಸಿಎಂ ಸೊರೇನ್ ಅವರ ಭೇಟಿಯನ್ನು “ಸೌಜನ್ಯದ ಭೇಟಿ” ಎಂದು ಬಣ್ಣಿಸಿದ್ದಾರೆ ಮತ್ತು ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳು ಶೀಘ್ರದಲ್ಲೇ ಚರ್ಚೆಯನ್ನು ಪ್ರಾರಂಭಿಸಲಿವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಜಾರ್ಖಂಡ್ ಸಿಎಂ, “ನಾನು ಅವರನ್ನು ಭೇಟಿ ಮಾಡಲು ಬಹಳ ಸಮಯದಿಂದ ಯೋಜಿಸಿದ್ದೆ, ಇದು ಸೌಜನ್ಯಯುತ ಭೇಟಿಯಾಗಿದೆ. ನಾವು ಈಗ ಜಾರ್ಖಂಡ್ ವಿಧಾನಸಭೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಉಳಿದಂತೆ ಎಲ್ಲವು ಶಾಂತಿಯುತವಾಗಿ ನಡೆಯುತ್ತಿದ್ದು, ಭವಿಷ್ಯದಲ್ಲಿ ಚುನಾವಣೆಯಲ್ಲೂ ಜಯಭೇರಿ ಬಾರಿಸುತ್ತೇವೆ” ಎಂದು ತಿಳಿಸಿದ್ದಾರೆ. .